===
Thanks to Sri Vishwajna Acharya for the Song Script Below:
ಗುಬ್ಬಿಯಾಳೊ ಗೋವಿಂದ ಗೋವಿಂದಾ | ಗೋವಿಂದ ಗೋವಿಂದಾನೆಂದು ನೆನೆಯಿರೊ ಗುಬ್ಬಿಯಾಳೊ ||ಪ|| ಕೇಶವನ್ನ ನೆನೆದರೆ ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ ||೧|| ಮಾಧವನ್ನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ಗೋವಿಂದನ್ನ ದಯದಿಂದ ಘೋರದುರಿತ ನಾಶನವು ಗುಬ್ಬಿಯಾಳೊ ||೨|| ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೇ ಗುಬ್ಬಿಯಾಳೊ ಮಧುಸೂದನನ ಧ್ಯಾನದಿಂದ ಅತಿಶಯವು ಇಹುದೊ ಗುಬ್ಬಿಯಾಳೊ ||೩|| ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ ||೪|| ಶ್ರೀಧರನ್ನ ನೆನೆದರೆ ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷೀಕೇಶನ ಧ್ಯಾನದಿಂದ ಹೃದಯ ಪರಿಶುದ್ಧವೊ ಗುಬ್ಬಿಯಾಳೊ ||೫|| ಪದ್ಮನಾಭ ನಮ್ಮೆಲ್ಲರ ಪಾಲಿಸಿ ರಕ್ಷಿಪನೊ ಗುಬ್ಬಿಯಾಳೊ ದಾಮೋದರನ ನೆನೆದರೆ ಪಾಮರತ್ವ ಬಿಡಿಸುವನೊ ಗುಬ್ಬಿಯಾಳೊ ||೬|| ಸಂಕರ್ಷಣನ ಧ್ಯಾನದಿಂದ ಸಂತಾನ ಅಭಿವೃದ್ಧಿಯು ಗುಬ್ಬಿಯಾಳೊ ವಾಸುದೇವನ ದಯದಿಂದ ವಂಶ ಉದ್ಧಾರವೊ ಗುಬ್ಬಿಯಾಳೊ ||೭|| ಪ್ರದ್ಯುಮ್ನನ ನೆನೆದರೆ ಭೂಪ್ರದಕ್ಷಿಣೆ ಫಲವು ಗುಬ್ಬಿಯಾಳೊ ಅನಿರುದ್ಧನ ಸೇವಿಸೆ ಪುನೀತರಹೆವೊ ಗುಬ್ಬಿಯಾಳೊ ||೮|| ಪುರುಷೋತ್ತಮನ್ನ ಪುರಾಣಪುರುಷನೆಂದು ತಿಳಿಯಿರೊ ಗುಬ್ಬಿಯಾಳೊ ಅಧೋಕ್ಷಜ ನಮ್ಮೆಲ್ಲರಿಗಾಧಾರವಾಗಿಹನೊ ಗುಬ್ಬಿಯಾಳೊ ||೯|| ನಾರಸಿಂಹದೇವರು ನಮ್ಮ ಕುಲದೈವವೊ ಗುಬ್ಬಿಯಾಳೊ ಅಚ್ಯುತ ಲಕ್ಷ್ಮಿಯ ಕೂಡಿ ಸಚ್ಚಿದಾನಂದನೊ ಗುಬ್ಬಿಯಾಳೊ ||೧೦|| ಜನಾರ್ದನದೇವರು ಜಗಕೆಲ್ಲ ಶ್ರೇಷ್ಠರೊ ಗುಬ್ಬಿಯಾಳೊ ಉಪೇಂದ್ರನು ನಮ್ಮ ಅಪರಾಧವ ಕ್ಷಮಿಸುವನೊ ಗುಬ್ಬಿಯಾಳೊ ||೧೧|| ಹರಿನಾಮಾಮೃತಕೆ ಸರಿ ಧರೆಯೊಳಗೆ ಇಲ್ಲವೊ ಗುಬ್ಬಿಯಾಳೊ ಶ್ರೀಕೃಷ್ಣ ರಂಗೇಶಯೆಂಬೊ ಸಿದ್ಧಕ್ರಿಯ ಬಲ್ಲರೆ ಗುಬ್ಬಿಯಾಳೊ ||೧೨|| ಈ ಗುಬ್ಬಿ ಪಾಡುವರಿಗೆ ಇಹ ಪರವು ಸಂತತವು ಗುಬ್ಬಿಯಾಳೋ ಧರಣಿಯೊಳು ಆಚಂದ್ರಾರ್ಕ ತಾರಕವಾಗಿಹರು ಗುಬ್ಬಿಯಾಳೊ ||೧೩|| ಹಯವದನನ್ನ ಪಾದಧ್ಯಾನ ನಿತ್ಯ ಮರೆಯದೆ ನೀ ನೆನೆ ಮನವೆ ನಮ್ಮ ಹಯವದನನ್ನ ಪಾದವೇ ನಿತ್ಯ ಮನವೆ ಗುಬ್ಬಿಯಾಳೊ ||೧೪ ||
0 Comments